ಬೆಂಗಳೂರು : ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಮ್ಮು ಕಾಶ್ಮೀರದ ನಿವಾಸಿಯಾಗಿದ್ದ ಶಂಕಿತ ಉಗ್ರ ತಾಲಿಬ್ ಹುಸೇನ್ ನಗರದ ಶ್ರೀರಾಮಪುರ ಮಸೀದಿ ಬಳಿ ವಾಸವಾಗಿದ್ದ. ಆದರೆ ಆತನಿಗೆ ನಿಷೇಧಿತ ಉಗ್ರ ಸಂಘಟನೆಯೊಂದಿಗೆ ಲಿಂಕ್ ಇರುವ ಹಿನ್ನೆಲೆಯಲ್ಲಿ ಜಮ್ಮು ಪೊಲೀಸರ ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ಶಂಕಿತರ ಮೇಲೆ ಪೊಲೀಸರು ನಿರಂತರ ಕಣ್ಣಿಟ್ಟಿದೆ. ಜಮ್ಮ-ಕಾಶ್ಮೀರ ಪೊಲೀಸರು ಕೂಡ ಹದ್ದಿನ ಕಣ್ಣಿಟ್ಟಿದ್ದಾರೆ. ಕಾಶ್ಮೀರ ಪೊಲೀಸರಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದರು.
ಉಗ್ರನ ಬಂಧನ ವಿಚಾರವಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾತನಾಡಿ, ಜಮ್ಮು ಕಾಶ್ಮೀರ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ. ಆದರೆ ನಮಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಇದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ.










