ಬೆಂಗಳೂರಿನಲ್ಲಿ ಮತ್ತೊಂದು ಕಾರು ಅಪಘಾತ – ಡಿವೈಡರ್ ಗೆ ಡಿಕ್ಕಿ ಹೊಡೆದ ಐಷರಾಮಿ ಕಾರು…

135
firstsuddi

ಬೆಂಗಳೂರು : ನಗರದಲ್ಲಿ ಮತ್ತೊಂದು ಐಷರಮಿ ಕಾರು ಅಪಘಾತಕ್ಕೀಡಾಗಿರುವ ಘಟನೆ ಯಲಹಂಕ ಫ್ಲೈಓವರ್ ಬಳಿ ನಡೆದಿದೆ.

ನಿನ್ನೆ ರಾತ್ರಿ ಸುಮಾರು 9 ಗಂಟೆಗೆ ಫೆರಾರಿ ಕಾರು ಅಪಘಾತಕ್ಕೀಡಾಗಿದೆ. ಈ ಕಾರು ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಕ್ ಒಡೆತನದ ಒಡೆತನದಲ್ಲಿದೆ ಎಂದು ಹೇಳಲಾಗುತ್ತಿದೆ. ಫಾರೂಖ್ ಒಡೆತನದ MH 02 FF 5555 ನಂಬರಿನ ಐಷಾರಾಮಿ ಫೆರಾರಿ ಪೋರ್ಟೋಫಿನೋ ಕಾರು ನಿಯಂತ್ರಣ ತಪ್ಪಿ ಮೊದಲಿಗೆ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರು ರಸ್ತೆ ವಿಭಜಕಕ್ಕೆ ಗುದ್ದಿದ್ದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಾರು ಚಲಾಯಿಸುತ್ತಿದ್ದವರು ಯಾರು ಎಂಬ ಬಗ್ಗೆ ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.