ಬೆಂಗಳೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು…

48
firstsuddi

ಬೆಂಗಳೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಮಹಾಲಕ್ಷ್ಮೀ ಲೇಔಟ್ ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ ಯಶೋಧಾ(70), ಮಗಳು ಸುಮನ್ ಗುಪ್ತಾ(41), ಮಗ ನರೇಶ್ ಗುಪ್ತಾ(36) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಯಶೋಧಾರಿಗೆ ಮೂವರು ಮಕ್ಕಳಿದ್ದಾರೆ. ಈ ಪೈಕಿ ಒಬ್ಬ ಮಗಳು ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದಾಳೆ. ಮಗ ನರೇಶ್, ಮತ್ತೋರ್ವ ಪುತ್ರಿ ಸುಮನ್ ತಾಯಿ ಯಶೋಧಾ ಜೊತೆ ನೆಲೆಸಿದ್ದರು. ಆದರೆ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ನರೇಶ್ ವೃತ್ತಿಯಲ್ಲಿ ಕಾಂಟ್ರಾಕ್ಟರ್ ಆಗಿದ್ದ.

ಯಶೋಧರಿಗೆ ಸಂಬಂಧಿಕರು ಹಲವು ಬಾರಿ ಕರೆ ಮಾಡಿದ್ದು ಅವರು ಸ್ವೀಕರಿಸಿಲ್ಲ. ಈ ಹಿನ್ನಲೆ ಸಂಬಂಧಿಕರು ರಾಜಾಜಿನಗರದಲ್ಲಿರುವ 2ನೇ ಮಗಳಿಗೆ ಕಾಲ್ ಮಾಡಿ ತಿಳಿಸಿದ್ದಾರೆ. ನಂತರ ಮನೆ ಒಳಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಮೃತದೇಹಗಳನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.