ಬೆಂಗಳೂರು : ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಸಂತೋಷ್ ಕುಮಾರ್(54), ಆತನ ಪತ್ನಿ ಓಮನ್ ಸಂತೋಷ್(50) ಹಾಗೂ ಮಗಳು ಸನುಷಾ(17) ಆತ್ಮಹತ್ಯೆ ಮಾಡಿಕೊಂಡವರು.
ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










