ಬೆಂಗಳೂರು : ಒಂದೇ ಶಾಲೆಯ ಮೂವರು ಬಾಲಕಿಯರು ನಾಪತ್ತೆ…

49
firstsuddi

ಬೆಂಗಳೂರು : ನಗರದಲ್ಲಿ ಒಂದೇ ಶಾಲೆಯ ಮೂವರು ಬಾಲಕಿಯರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೇಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಶಕ್ತೇಶ್ವರಿ (15), ವರುಣಿಕಾ (16), ನಂದಿನಿ(15) ನಾಪತ್ತೆಯಾಗಿದ್ದಾರೆ. ಸೆಪ್ಟೆಂಬರ್ 6 ರಂದು ಮೂವರು ಬಾಲಕಿಯರು ನಾಪತ್ತೆಯಾಗಿದ್ದು, ಪೋಷಕರು ಪುಲಕೇಶಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಣೆಯಾಗಿ 9 ದಿನವಾದರೂ ಇನ್ನೂ ಕೂಡ ಮಕ್ಕಳು ಪತ್ತೆಯಾಗಿಲ್ಲ. ಅಲ್ಲದೆ ಶಾಲೆಯಲ್ಲಿ ಕೇಳಿದರೆ ಸಿಬ್ಬಂದಿ ಸರಿಯಾಗಿ ಉತ್ತರ ನೀಡ್ತಿಲ್ಲ ಎಂದು ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆರೋಪ ಮಾಡಿದ್ದಾರೆ.

ಮನೆಯಲ್ಲಿ ಸಮಸ್ಯೆ. ಹಾಗಾಗಿ, ಮನೆ ಬಿಟ್ಟು ಹೋಗ್ತಿದ್ದೀವಿ. ಓದಲು ಇಷ್ಟವಿಲ್ಲ ಎಂದು ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.