ಬೆಂಗಳೂರು ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ನಾಪತ್ತೆ.

27

ಬೆಂಗಳೂರು: ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಇಬ್ಬರು ಮಕ್ಕಳು ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ಬಳಿ ಆಟವಾಡಲು ಹೋಗಿದ್ದರು ಆ ಸಮಯದಲ್ಲಿ ಅಣ್ಣ-ತಂಗಿ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಅನುಮಾನ ವ್ಯಕ್ತವಾಗಿದೆ. ಸೋಮವಾರ ಸಂಜೆ ಕೆಂಗೇರಿ ಕೆರೆ ಬಳಿ ಆಟವಾಡಲು ಹೋಗಿದ್ದ ಜಾನ್ ಸೀನಾ (13), ಮಹಾಲಕ್ಷ್ಮೀ(11) ಅಣ್ಣ-ತಂಗಿ ಕೆಂಗೇರಿ ಕೆರೆ ಬಳಿ ನಾಪತ್ತೆಯಾಗಿದ್ದಾರೆ. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆಗಳು ಪತ್ತೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ಬಂದು, ಶೋಧಕಾರ್ಯ ನಡೆಯುತ್ತಿದೆ. ಕೆಂಗೇರಿ ಕೆರೆ ಬಳಿ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ನಾಗಮ್ಮ ಬಿಬಿಎಂಪಿಯಲ್ಲಿ ಕಸ ವಿಂಗಡಣೆ ಕೆಲಸ ಮಾಡುತ್ತಿದ್ದಾರೆ.