ಬೆಂಗಳೂರು : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ 1800 ವಿಶೇಷ ಬಸ್ ವ್ಯವಸ್ಥೆ…

251
firstsuddi

ಬೆಂಗಳೂರು : ಗೌರಿ-ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಆ.30 ಮತ್ತು 31 ರಂದು ಹಬ್ಬಕ್ಕೆ ದೂರದ ಊರಿಗೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕೆಂಪೇಗೌಡ ಬಸ್ ನಿಲ್ದಾಣದಿಂದ 1800 ಹೆಚ್ಚುವರಿ ವಿಶೇಷ ಬಸ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್ ಕೆಂಪೆಗೌಡ ಬಸ್ ನಿಲ್ದಾಣದಿಂದ ಮಂಗಳೂರು, ಹುಬ್ಬಳ್ಳಿ, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಚಿಕ್ಕಮಗಳೂರು, ಹಾಸನ, ದಾವಣಗೆರೆ ಹಾಗೂ ಬೆಂಗಳೂರು ಹಾಗೂ ಅಂತರ್‍ರಾಜ್ಯಕ್ಕೆ ತೆರಳುವ ಪ್ರಯಾಣಿಕರಿಗೆ ವಿಶೇಷ ಬಸ್‍ಗಳು ಸಂಚರಿಸಲಿದೆ ಎಂದು ಮೂಲಗಳು ತಿಳಿಸಿವೆ.