ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ದಾಶ್ರಮದಲ್ಲಿ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಕುರಿತು ಹೆಚ್ಚಿನ ವಿವರ ತಿಳಿದುಬರಬೇಕಾಗಿದೆ.
ಕಳೆದ ವರ್ಷ ಜುಲೈ ತಿಂಗಳಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಯಶ್ರೀ ರಾಮಯ್ಯ, ತಮ್ಮ ಫೇಸ್ ಬುಕ್ ನಲ್ಲಿ “ಖಿನ್ನತೆ ಮತ್ತು ಈ ಜಗತ್ತಿಗೆ ಗುಡ್ ಬೈ” ಎಂದು ಬರೆದುಕೊಳ್ಳುವ ಮೂಲಕ ಆತಂಕ ಸೃಷ್ಟಿಸಿದ್ದರು. ಅಲ್ಲದೆ ಈ ಪೋಸ್ಟ್ ಹಾಕಿದ ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜಯಶ್ರೀಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮತ್ತೊಂದು ಬಾರಿ ದಯ ಮರಣ ದಯಪಾಲಿಸಿ ಎಂದು ಅಂಗಲಾಚಿಕೊಂಡಿದ್ದರು. ಆದಾಗ ಬಳಿಕ ಕೇಶ ಮುಂಡನ ಮಾಡಿಕೊಂಡು ಮತ್ತೆ ಸುದ್ದಿಯಲ್ಲಿದ್ದರು.
ಉಪ್ಪು ಹುಳಿ ಖಾರ ಮತ್ತು ಕನ್ನಡ್ ಗೊತ್ತಿಲ್ಲ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಜಯಶ್ರೀ ರಿಯಾಲಿಟಿ ಶೋ ಬಿಗ್ಬಾಸ್ ಮೂಲಕ ಖ್ಯಾತಿ ಪಡೆದುಕೊಂಡಿದ್ದರು. ಆದರೆ, ಇಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಅಭಿಮಾನಿಗಳಿಗೆ ನೋವು ತಂದಿದೆ.










