ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ…

77
firstsuddi

ಬೆಂಗಳೂರು : ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಮೇಲೆ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿ ನಡೆಸಿದೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಳಗ್ಗೆ 6 ಗಂಟೆಯಿಂದಲೂ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಗಾಂಜಾ, ಮೊಬೈಲ್ ಸೇರಿದಂತೆ ಇನ್ನಿತರ ಅಕ್ರಮ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ದಾಳಿ ನಡೆಸಿದಾಗಲೂ ಗಾಂಜಾ ಪತ್ತೆಯಾಗಿತ್ತು. ಸದ್ಯ ಸಿಸಿಬಿ ಪೊಲೀಸರು ಮತ್ತಷ್ಟು ಹುಡುಕಾಟವನ್ನ ಮುಂದುವರಿಸಿದ್ದಾರೆ.