ಬೆಂಗಳೂರು : ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು…

58
firstsuddi

ಬೆಂಗಳೂರು : ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕಾಮಾಕ್ಷಿಪಾಳ್ಯ ಬಳಿಯ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.

ಸುಮನ್ ಹಳ್ಳಿಯಿಂದ ಲಗ್ಗೆರೆ ಕಡೆ ಚಲಿಸುತ್ತಿದ್ದ ಬಸ್ ಮುಂದೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆಬಿದ್ದು ಬೈಕ್ ಸವಾರ ಪ್ರಮೋದ್ ಸಾವನ್ನಪ್ಪಿದ್ದಾನೆ. ರೊಚ್ಚಿಗೆದ್ದ ಸಾರ್ವಜನಿಕರು ಚಾಲಕನಿಗೆ ಧರ್ಮದೇಟು ನೀಡಿದ್ದು ಹೊಯ್ಸಳ ಸಿಬ್ಬಂದಿ ಚಾಲಕನನ್ನು ರಕ್ಷಿಸಿ ಠಾಣೆಗೆ ಕರೆದೊಯ್ದಿದ್ದಾರೆ.

ಬೈಕ್ ಸವಾರ ಪ್ರಮೋದ್ ಸಾವಿಗೆ ರೋಡ್ ಸ್ಟ್ರಿಪ್ಸ್ ಕಾರಣ ಎನ್ನಲಾಗುತ್ತಿದೆ. ಪ್ರಮೋದ್ ರಸ್ತೆಯಲ್ಲಿ ತೆರಳುತ್ತಿದ್ದಾಗ ರೋಡ್ ಸ್ಟ್ರಿಪ್ಸ್ ಬಳಿ ಬೈಕ್ ಸ್ಲೋ ಮಾಡಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.