ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​ವೇನಲ್ಲಿ ಭೀಕರ ಅಪಘಾತ – ಮೂವರು ಸಾವು…

51
firstsuddi

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​ವೇನಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ತಾಲೂಕಿನ ಜಯಪುರ ಗೇಟ್ ಬಳಿ ನಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ಮೂವರು ಯುವಕರು ಒಂದೇ ಬೈಕ್ ನಲ್ಲಿ ಹೋಗುತ್ತಿದ್ದಾಗ ಕೆಟ್ಟು ನಿಂತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್​ನಲ್ಲಿದ್ದ ಮೂವರು ಹೆದ್ದಾರಿಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಗೆ ಬಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.