ಬೆಂಗಳೂರು: ಸಿಸಿಬಿ ಮಿಂಚಿನ ಕಾರ್ಯಾಚರಣೆ, ಮಾದಕವಸ್ತು ಮಾರುತ್ತಿದ್ದ ನಾಲ್ವರು ಬಂಧನ.

135

ಬೆಂಗಳೂರು: ನಗರದಲ್ಲಿ ಮತ್ತೆ ಡ್ರಗ್ಸ್ ಪೆಡ್ಲರ್ಗಳ ಹಾವಳಿ ಹೆಚ್ಚಾಗಿದ್ದು, ಇಂದು ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ, ಮಾದಕವಸ್ತು ಮಾರುತ್ತಿದ್ದ ಇಬ್ಬರು ನೈಜೀರಿಯನ್ ಪ್ರಜೆಗಳು ಹಾಗೂ ಮತ್ತಿಬ್ಬರು ಅಂತರ್ ರಾಜ್ಯ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ.
ಬಂಧಿತರಿಂದ 75 ಲಕ್ಷ ರೂ. ಮೌಲ್ಯದ 1 ಕೆಜಿ ಎಂಡಿಎಂಎ ಹಾಗೂ ಮೂರು ಮೊಬೈಲ್, ತೂಕದ ಮಷಿನ್, ಬೈಕ್ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾ ಪ್ರಜೆಗಳ ಬಳಿ ಯಾವುದೇ ಪಾಸ್ಪೋರ್ಟ್ಗಳಿಲ್ಲದೆ, ಅವರು ಅಕ್ರಮವಾಗಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.