ಬೆಂಗಳೂರು : ಸೆಪ್ಟೆಂಬರ್ 13ರಿಂದ ಸೆ.24ರ ವರೆಗೆ ವಿಧಾನಮಂಡಲ ಅಧಿವೇಶನ…

131
firstsuddi

ಬೆಂಗಳೂರು : ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 24ರವರೆಗೆ ವಿಧಾನಮಂಡಲ ಅಧಿವೇಶನ ಬೆಂಗಳೂರಿನಲ್ಲಿ ಹತ್ತು ದಿನಗಳ ಕಾಲ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ .ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಂಪುಟ ಪುನಾರಚನೆ ಆಗಿದೆ. ಹೀಗಾಗಿ  ಕ್ಯಾಬಿನೆಟ್ ಉಪಸಮಿತಿ ಪುನಾರಚನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಚರ್ಚಿಸಲಾದ ವಿಷಯಗಳು :
• 2021-22ನೇ ಸಾಲಿಗೆ ಸರ್ಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳ ಹದಿಹರೆಯದ ಹೆಣ್ಣು ಮಕ್ಕಳಿಗೆ ‘ಶುಚಿ’ ಕಾರ್ಯಕ್ರಮದಡಿ ಸ್ಯಾನಿಟರಿ ನ್ಯಾಪ್ ಕಿನ್ ಪ್ಯಾಡ್ಗಳನ್ನು 47 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಿ ವಿತರಿಸಲು ಆಡಳಿತಾತ್ಮಕ ಅನುಮೋದನೆ
• ಕಲಬುರಗಿ ಜಿಲ್ಲೆ ಆಳಂದ ತಾಲೂಕು ಮಿನಿ ವಿಧಾನ ಸೌಧ ಕಟ್ಟಡ ಕಾಮಗಾರಿಯ 12.48 ಕೋಟಿ ರೂ. ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ
• ರಾಜ್ಯದಲ್ಲಿನ 2,859 ಆರೋಗ್ಯ ಉಪ ಕೇಂದ್ರಗಳನ್ನು ‘ಆರೋಗ್ಯ ಮತ್ತು ಕ್ಷೇಮ ಕೇಂದ್ರ’ಗಳನ್ನಾಗಿ 478.91 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ.
• ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂಗ್ರಹವಾಗಿರುವ 9 ಲಕ್ಷ ಟನ್ ಪಾರಂಪರಿಕ ತ್ಯಾಜ್ಯ ನಿರ್ವಹಣೆಗಾಗಿ ಸಲ್ಲಿಸಿರುವ 73.73 ಕೋಟಿ ರೂ.ಗಳ ವಿಸ್ತೃತ ಯೋಜನಾ ವರದಿಗೆ ಅನುಮೋದನೆ.
• ಆಜಾದಿ ಅಮೃತ ಮಹೋತ್ಸವ ಅಂಗವಾಗಿ 400 ಕೋಟಿ ಮೊತ್ತದ ವಿವಿಧ ಅಮೃತ ಕಾರ್ಯಕ್ರಮಗಳಿಗೆ ಅನುನೋದನೆ