ಬೆಳಗಾವಿ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಎತ್ತಂಗಡಿ…

75
firstsuddi

ಬೆಳಗಾವಿ : ಬೆಳಗಾವಿಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್ ಪುಂಡಾಟ ನಡೆಸಿತ್ತು. ಮಹಾಮೇಳ ಹೆಸರಿನಲ್ಲಿ ಎಂಇಎಸ್ ಭಾಷಾ ಕಿಚ್ಚು ಹೊತ್ತಿಸಿತ್ತು. ಕಲ್ಲು ತೂರಾಟ, ರಾಯಣ್ಣ ಮೂರ್ತಿ ಭಗ್ನ ಪ್ರಕರಣ ಸಂಬಂಧಿಸಿದಂತೆ 38 ಜನರು ಬಂಧನ ಆಗಿತ್ತು.

ಆದರೆ ಬೆಳಗಾವಿಯಲ್ಲಿ ನಡೆದ ಎಲ್ಲಾ ಗಲಾಟೆಗಳಿಗೆ ಪೊಲೀಸ್ ವೈಫಲ್ಯವೇ ಕಾರಣ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಆರೋಪಿಸಿದ್ದರು. ಈ ಹಿನ್ನಲೆ ಇದೀಗ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದ್ದು, ನೂತನ ಪೊಲೀಸ್ ಆಯುಕ್ತರನ್ನಾಗಿ ಡಾ.ಬೋರಲಿಂಗಯ್ಯ ಅವರನ್ನು ನೇಮಕ ಮಾಡಲಾಗಿದೆ.

ಇನ್ನೂ ಬೆಳಗಾವಿ ನಗರದಲ್ಲಿ ಪುಂಡಾಟ ಮೆರೆದಿದ್ದ ಎಂಇಎಸ್ ನ ಮುಖಂಡ ಶುಭಂ ಶೆಳ್ಕೆ ಸೇರಿ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಬೆಳಗಾವಿಯ 8ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದೆ.