ಬೆಳಗಾವಿಯಲ್ಲಿ ಕಾಂಗ್ರೆಸ್‍ಗೆ ಭರ್ಜರಿ ಗೆಲುವು – ಲಖನ್ ಜಾರಕಿಹೊಳಿಗೆ ಎರಡನೇ ಸ್ಥಾನ…

82
firstsuddi

ಬೆಳಗಾವಿ : ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ, ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

3431 ವೋಟ್ಗಳನ್ನು ಪಡೆದು ಮೊದಲ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚೆನ್ನರಾಜು ಜಯಗಳಿಸಿದ್ದಾರೆ. ಎರಡನೇ ಸ್ಥಾನವನ್ನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನ ಪಡೆದಿದ್ದಾರೆ. ಎರಡನೇ ಪ್ರಾಶಸ್ತ್ಯದ ಮತಗಳ ಎಣಿಕೆ ಬಳಿಕ ಸ್ಪಷ್ಟ ಫಲಿತಾಂಶ ಹೊರಬೀಳಲಿದೆ.