ಬೆಳಗಾವಿಯಲ್ಲಿ ಕಾಮುಕರ ಅಟ್ಟಹಾಸ ; ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್! ಆರೋಪಿಗಳು ಅರೆಸ್ಟ್…

117
firstsuddi

ಬೆಳಗಾವಿ : ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಈ ಘಟನೆ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಆದರೆ, ದೂರು ದಾಖಲಾಗಿ 10 ಗಂಟೆಯೊಳಗೆ ಕಾಮುಕರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಮೀನಿಗೆ ಹೋಗಿದ್ದ 15ವರ್ಷದ ಬಾಲಕಿ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿರುವ ಘಟನೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತೆಯ ಪೋಷಕರು ನಿನ್ನೆ ಸಂಜೆ ಫಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ದುರ್ಘಟನೆ 20 ದಿನಗಳ ಹಿಂದೆಯೇ ನಡೆದಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಪೋಷಕರ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಅಪ್ರಾಪ್ತೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸಂತ್ರಸ್ತೆಯ ಹೇಳಿಕೆ ಹಾಗೂ ಪೋಷಕರ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇದೀಗ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. 

ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ಆರಂಭಿಸಿ ನಾಲ್ವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಬೆಳಗಾವಿ ಎಸ್.ಪಿ.ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.