ಬೆಳಗಾವಿಯಲ್ಲಿ ಗೋಡೆ ಕುಸಿದು ಏಳು ಮಂದಿ ಸಾವು ; 2 ಲಕ್ಷ ರೂ.ಪರಿಹಾರ ಘೋಷಿಸಿದ ಪ್ರಧಾನಿ ಮೋದಿ.

72
firstsuddi

ನವದೆಹಲಿ : ಬೆಳಗಾವಿ ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಿನ್ನೆ ಮಳೆಗೆ ಹಳೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಆರು ಮಂದಿ ಮತ್ತು ಪಕ್ಕದ ಮನೆಯ ಬಾಲಕಿ ಸೇರಿ ಏಳು ಮಂದಿ ಮೃತಪಟ್ಟಿದ್ದರು. ಈ ಘಟನೆ ಬಗ್ಗೆ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು 2ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಕಚೇರಿ, ಬೆಳಗಾವಿಯಲ್ಲಿ ಮನೆ ಕುಸಿತದಿಂದ ಜೀವಹಾನಿಯಾಗಿರುವುದು ದುಃಖಕರವಾಗಿದೆ. ಪಿಎಂಎನ್‌ಆರ್‌ಎಫ್‌ನಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಅವರ ಕಚೇರಿ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮೃತ ಕುಟುಂಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದರು.