ಬೆಳಗಾವಿಯಲ್ಲಿ ನೈತಿಕ ಪೊಲೀಸ್‍ಗಿರಿ – ಇಬ್ಬರು ಆರೋಪಿಗಳ ಬಂಧನ…

46
firstsuddi

ಬೆಳಗಾವಿ : ಜಿಲ್ಲೆಯಲ್ಲಿ ನೈತಿಕ ಪೊಲೀಸ್‍ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಸಿನಿಮೀಯ ರೀತಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ್ದ ಆಟೋ ಚಾಲಕ ದಾವತ್ ಕತೀಬ್, ಅಯೂಬ್ ಮತ್ತು ಯುಸೂಫ್ ಪಠಾಣ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ 14 ರಂದು ಈ ಕೃತ್ಯ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ರಾಯಬಾಗ ಮೂಲದ ಯುವಕ, ಸಂಕೇಶ್ವರ ಮೂಲದ ಯುವತಿ ಅ.14ರಂದು ಜಿಲ್ಲೆಗೆ ಆಗಮಿಸಿದ್ದು, ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಆಟೋಗಾಗಿ ಈ ಜೋಡಿ ಕಾದು ನಿಂತಿತ್ತು. ಆಟೋ ಚಾಲಕನ ಬಳಿ ಯಾವುದಾದರೂ ಉದ್ಯಾನಕ್ಕೆ ಕರೆದುಕೊಂಡು ಹೋಗುವಂತೆ ಕೇಳಿದ್ದಾರೆ. ಆದರೆ, ಆತ ಉದ್ಯಾನದ ಬದಲಾಗಿ ಅಮನ್ ನಗರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅನ್ಯಕೋಮಿನ ಯುವಕನ ಜೊತೆಗೆ ಓಡಾಡುತ್ತಿದ್ದೀಯಾ ಅಂತ ಯುವತಿಗೆ ಥಳಿಸಲಾಗಿದೆ.

ಯುವಕ ಮತ್ತು ಯುವತಿ ಬಳಿಯಿದ್ದ 20 ಸಾವಿರ ಮೌಲ್ಯದ ಮೊಬೈಲ್, 50 ಸಾವಿರ ನಗದು ಹಣ ಮತ್ತು ಆಧಾರ ಕಾರ್ಡ್, ಎಟಿಎಂ ಕಾರ್ಡ್ ಕಸಿದುಕೊಂಡು ಪರಾರಿಯಾಗಿದ್ದರು. ತಕ್ಷಣವೇ ಹಲ್ಲೆಗೊಳಗಾದ ಯುವತಿ ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. 20 ಜನರ ಗುಂಪಿನಿಂದ ರಾಡ್, ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಸದ್ಯ ಇಬ್ಬರನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.