ಬೆಳೆ ಪರಿಹಾರದ ಮೊತ್ತ ಮಧ್ಯವರ್ತಿಗಳಿಗೆ ಅವಕಾಶವಿಲ್ಲದಂತೆ ನೇರವಾಗಿ ರೈತರ ಖಾತೆಗಳಿಗೆ ವರ್ಗಾವಣೆ : ಆರ್.ಅಶೋಕ್.

68
firstsuddi

ಬೆಂಗಳೂರು : ವಿಧಾನ ಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಅವರು, ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಅಪಾರ ಬೆಳೆ ಮತ್ತು ಆಸ್ತಿ ಹಾನಿ ಸಂಭವಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದಿನವರೆಗೆ 3 ಲಕ್ಷ ರೈತರಿಗೆ 226.57 ಕೋಟಿ ಪರಿಹಾರ ವಿತರಿಸಿದ್ದೇವೆ. ಇಂದು 1.61 ರೈತರಿಗೆ 92.30 ಕೋಟಿ ಹಣ ಬಿಡುಗಡೆ ಮಾಡುತ್ತಿದ್ದೇವೆ. ಒಟ್ಟು 4.61 ರೈತರಿಗೆ 318.87 ಕೋಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಆಗಿದ್ದು, ಮಧ್ಯವರ್ತಿಗಳಿಗೆ ಅವಕಾಶವಿಲ್ಲದಂತೆ ನೇರವಾಗಿ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದರು.

ಎನ್ ಡಿಆರ್ ಎಫ್ ನಿಯಮದಡಿಯಲ್ಲಿ ಕೇಂದ್ರಕ್ಕೆ ವರದಿ ಕೊಡಲಾಗುವುದು. ಒಟ್ಟಾರೆ ನಷ್ಟ, ರಸ್ತೆ, ವಿದ್ಯುತ್ ಕಂಬ ಸೇರಿದಂತೆ ಹಲವು ಹಾನಿ ಬಗ್ಗೆ ಅಂದಾಜು ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳು ಖಾತೆಗಳ ಮೂಲಕ ಹಣ ನೀಡುವಂತೆ ಸೂಚನೆ ನೀಡಲಾಗಿದೆ. ಪಿಡಿ ಖಾತೆಯಲ್ಲಿ 600 ಕೋಟಿ ರೂ. ಹಣ ಇದೆ. ಯಾವುದೇ ಹಣದ ಕೊರತೆ ಇಲ್ಲ. ರೈತರಿಗೆ ಅನುಕೂಲವಾಗಬೇಕು. ರೈತರ ಹಿತ ಕಾಯಲು ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದರು.

ಲಾಕ್ ಡೌನ್ ಕುರಿತು ಮಾತನಾಡಿದ ಅವರು, ಸದ್ಯಕ್ಕೆ ಲಾಕ್ ಡೌನ್ ಇಲ್ಲ. ರಾಜ್ಯದ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊರದೇಶದಿಂದ ಬರುವವರನ್ನು ತೀವ್ರ ತಪಾಸಣೆಗೆ ಒಳಪಡಿಸುತ್ತೇವೆ. ಹೊರದೇಶಗಳ ಸ್ಥಿತಿ ಸಹ ನಮ್ಮ ಗಮನದಲ್ಲಿದೆ ಎಂದರು.

ಮುರುಗೇಶ್ ನಿರಾಣಿ ಸಿಎಂ ಆಗಲಿದ್ದಾರೆ ಅಂತಾ ಸಚಿವ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರೂ ತಿರುಕನ ಕನಸು ಕಾಣೋದು ಬೇಡ ಎಂದು ಟಾಂಗ್ ನೀಡಿದರು.