ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಐಟಿ ದಾಳಿ…

66
firstsuddi

ಬೆಂಗಳೂರು : ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಐಟಿ ದಾಳಿ ನಡೆದಿದೆ. ಕಾರ್ಪೊರೇಟ್ ಕಂಪನಿಗಳ ವ್ಯವಸ್ಥಾಪಕರು, ನಿರ್ದೇಶಕರುಗಳು ಹಾಗೂ ಉದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಸಂಜಯನಗರ, ಹೆಬ್ಬಾಳ, ಕೊಡಿಗೇಹಳ್ಳಿಯ ಬ್ರಿಗೇಡ್ ಓಪಸ್ ನಲ್ಲಿರುವ ಕಂಪನಿ, ಬಿಡದಿ, ಚಿಕ್ಕಬಳ್ಳಾಪುರ, ರಾಮನಗರ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧಕಾರ್ಯ ಮುಂದುವರೆದಿದೆ.