ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ನಿಷೇಧಿತ ಪಿಎಫ್ಐ ಮುಖಂಡರ ಮನೆ ಮೇಲೆ ಎನ್ಐಎ ದಾಳಿ…

51
firstsuddi

ಮೈಸೂರು/ಮಂಗಳೂರು : ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆ ಮೇಲೆ ದಾಳಿ ನಡೆಸಿದೆ. ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಪಿಎಫ್ ಐ ಮುಖಂಡರ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ.

ಹೈದ್ರಾಬಾದ್ ನಿಂದ ಬಂದಿರೋ ಎನ್ ಐಎ ಅಧಿಕಾರಿಗಳು ಬೆಳಗಿನ ಜಾವ ಹಳೇ ಹುಬ್ಬಳ್ಳಿಯ ನುರಾನಿ ಪ್ಲಾಟ್ ನಲ್ಲಿರುವ ಎಸ್ ಡಿಪಿಐ ಮುಖಂಡ ಇಸ್ಮಾಯಿಲ್ ನಾಲಬಂದ್ ಮನೆ ಮೇಲೆ ದಾಳಿ ನಡೆಸಿದ್ದು ಮನೆಯಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ. ಹಾಗೂ ಇಸ್ಮಾಯಿಲ್ ಗೆ ನೋಟಿಸ್ ಕೊಟ್ಟಿದ್ದಾರೆ. ಮೈಸೂರಿನ ಎನ್.ಆರ್ ಮೊಹಲ್ಲಾ, ಮಂಡಿ ಮೊಹಲ್ಲಾದಲ್ಲಿ ಕೆಲ ಕಾರ್ಯಕರ್ತರ ಮನೆಗಳಲ್ಲಿ ತಪಾಸಣೆ ನಡೆಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.