‘ಬೇಷರಂ ರಂಗ್’ ಹಾಡಿನಲ್ಲಿ ಕೇಸರಿ ಬಿಕಿನಿ ತೊಟ್ಟ ದೀಪಿಕಾ – ನೆಟ್ಟಿಗರು ಗರಂ…

68
firstsuddi

ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಹಾಡು ಎರಡು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿ ಧೂಳೆಬ್ಬಿಸುತ್ತಿದೆ. ಈ ಹಾಡನ್ನು ಹದಿನೈದು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಆದರೆ, ಈ ಹಾಡಿನಲ್ಲಿ ದೀಪಿಕಾ ಹಾಕಿರುವ ಡ್ರೆಸ್ ಇದೀಗ ವಿವಾದಕ್ಕೆ ಕಾರಣವಾಗಿದೆ.

ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ಕೇಸರಿ ಬಣ್ಣದ ತುಂಡುಡುಗೆ ತೊಟ್ಟಿದ್ದಾರೆ. ‘ಬೇಷರಂ ರಂಗ್’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ನೆಟ್ಟಿಗರು ಗರಂ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಬೈಕಾಟ್ ಪಠಾಣ್ ಎಂಬ ಟ್ರೆಂಡ್ ಶುರುವಾಗಿದೆ.

2023ರ ಜನವರಿ 25ರಂದು ‘ಪಠಾಣ್’ ಚಿತ್ರ ರಿಲೀಸ್ ಆಗಲಿದೆ. ಸಿದ್ದಾರ್ಥ್ ಆನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಮೂಲಕ ಸಾಕಷ್ಟು ಭರವಸೆ ಮೂಡಿಸಿರುವ ಈ ಸಿನಿಮಾ, ಮೊದಲ ಹಾಡಿನ ಮೂಲಕ ಪ್ರಚಾರ ಆರಂಭಿಸಲಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಕಾಂಬಿಷೇನ್ ನ ಸಿನಿಮಾ ಇದಾಗಿದೆ. ಶಾರುಖ್ ಈ ಸಿನಿಮಾದಲ್ಲಿ ಮತ್ತೆ ಸಿಕ್ಸ್ ಪ್ಯಾಕ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿದ್ದಾರೆ.