ಬೈಕಿಗೆ ಮೀನಿನ ಲಾರಿ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲಿಯೇ ಸಾವು…

46
firstsuddi

ಮಂಗಳೂರು: ಬೈಕಿಗೆ ಮೀನಿನ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಎಕ್ಕೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.

ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಇಂದು ಮಧ್ಯಾಹ್ನ ಸುಮಾರು 12.15ರ ವೇಳೆಗೆ ಅಪಘಾತ ಸಂಭವಿಸಿದೆ. ಮಂಗಳೂರಿನ ಪಂಪ್ ವೆಲ್ ಭಾಗದಿಂದ ತೊಕ್ಕೋಟು ಕಡೆಗೆ ಸಾಗುತ್ತಿದ್ದ ಮೀನಿನ ಲಾರಿ ಎಕ್ಕೂರು ಬಳಿ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ಲಾರಿಯ ಚಕ್ರ ಸವಾರನ ಮೇಲೆ ಚಲಿಸಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮಂಗಳೂರಿನ ಟ್ರಾಫಿಕ್ ದಕ್ಷಿಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.