ಮಂಗಳೂರು : ಬೈಕ್ ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಮಂಗಳಮುಖಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬೆಂಗಳೂರಿನ ಇಜಿಪುರದಲ್ಲಿ ವಾಸವಿರುವ ಅಭಿಷೇಕ್ ಅಲಿಯಾಸ್ ಗೊಂಬೆ ಅಲಿಯಾಸ್ ಅನಾಮಿಕ (27) ಎಂದು ಗುರುತಿಸಲಾಗಿದೆ. ಗಣೇಶ್ ಶೆಟ್ಟಿ ಎಂಬಾತ ತಮ್ಮ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕದ್ರಿ ಬಿಎಸ್ ಎನ್ ಎಲ್ ಕಚೇರಿಯ ಬಳಿ ಆರೋಪಿ ಬೈಕನ್ನು ಅಡ್ಡಹಾಕಿ ಪೆಪ್ಪರ್ ಸ್ಪ್ರೇ ಹಾಕಿ ಗಣೇಶ್ ಶೆಟ್ಟಿ ಕುತ್ತಿಗೆಯಲ್ಲಿದ್ದ 24 ಗ್ರಾಂ ಚಿನ್ನದ ಸರವನ್ನು ಅಪಹರಿಸಿದ್ದನು.
ಈ ಬಗ್ಗೆ ಗಣೇಶ್ ಶೆಟ್ಟಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬೆಂಗಳೂರಿನಲ್ಲಿ ಇರುವುದನ್ನು ಖಚಿತಪಡಿಸಿಕೊಂಡು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.










