ಬೆಂಗಳೂರು: ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.
ಸುಲೋಚನ ಮೃತ ದುರ್ದೈವಿ. ಆನಂದ್ ಮತ್ತು ಸುಲೋಚನ ಕೋರಮಂಗಲದ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ಸ್ ಆಗಿದ್ರು. ನಿನ್ನೆ ಸಂಜೆ ಕೆಲಸ ಮುಗಿಸಿ ವಾಪಸ್ ಹೋಗುವ ವೇಳೆ ನೈಸ್ ರಸ್ತೆ ಟೋಲ್ ಬಳಿ ಟೈರ್ ಸ್ಫೋಟಗೊಂಡು ಬೈಕ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ಆನಂದ್ ಫುಲ್ ಹೆಲ್ಮೆಟ್ ಹಾಕಿದ್ರೆ, ಸುಲೋಚನ ಹಾಫ್ ಹೆಲ್ಮೆಟ್ ಹಾಕಿದ್ರು.
ಅಪಘಾತದಲ್ಲಿ ಇಬ್ಬರಿಗೂ ಗಂಭೀರ ಸ್ವರೂಪದ ಗಾಯವಾಗಿತ್ತು. ಇದೀಗ ಸುಲೋಚನ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಆನಂದ್ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










