ಬೈಕ್ ಅಪಘಾತ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿ, ಓರ್ವ ಸಾವು, 20ಮಂದಿಗೆ ಗಾಯ…

336
firstsuddi

ವಿಜಯಪುರ : ಬೈಕ್ ಅಪಘಾತ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟು, 20ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಬಳಗಾನೂರ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬೈಕಿನಲ್ಲಿದ್ದ ಬಾಲಕ ಬೀರಣ್ಣ ಪರದಾನಿ ಬೀರಗುಂಡ(15) ಮೃತಪಟ್ಟಿದ್ದು, ವಿಜಯಪುರದಿಂದ ತಾಳಿಕೋಟೆಗೆ ತೆರಳುತ್ತಿದ್ದ ಬಸ್ ಬೈಕ್‍ನಲ್ಲಿ ಬಂದ ಇಬ್ಬರು ಬಾಲಕರನ್ನು ಅಪಘಾತದಿಂದ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದ್ದು, ಈ ವೇಳೆ ಬೈಕ್ ಸವಾರರು ಬಸ್ಸಿನ ಚಕ್ರದ ಅಡಿಗೆ ಸಿಲುಕಿಕೊಂಡ ಪರಿಣಾಮ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ಸಿನಲ್ಲಿದ್ದ 20ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಸದ್ಯ ಗಾಯಾಳುಗಳಿಗೆ ತಾಳಿಕೋಟೆ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.