ಉಡುಪಿ : ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಾಪು ತಾಲೂಕು ಇನ್ನಂಜೆ ಕಲ್ಲುಗುಡ್ಡೆ ರಸ್ತೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್(31) ಎಂದು ಗುರುತಿಸಲಾಗಿದೆ. ಲಭ್ಯವಿರುವ ಮಾಹಿತಿಗಳ ಪ್ರಕಾರ ಸುನೀಲ್ ಕುಮಾರ್ ಇನ್ನಂಜೆ ಕಲ್ಲುಗಡ್ಡೆ ಬಂಟಕಲ್ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಡಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.










