ಚಿತ್ರದುರ್ಗ : ಬೈಕ್‍ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಶಾಲೆಗೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಜೆಎಂಐಟಿ ವೃತ್ತದ ಬಳಿ ನಡೆದಿದೆ. ಅಮೃತ(13) ಮೃತ ಬಾಲಕಿ ಎನ್ನಲಾಗಿದ್ದು, ಬೈಕ್ ನಲ್ಲಿ ತನ್ನ ಸಹೋದರಿ ಹಾಗೂ ಸಂಬಂಧಿಕರ ಜೊತೆ ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಮೂವರು ಕೆಳಗೆ ಬಿದ್ದಿದ್ದು, ಬಸ್ಸಿನ ಹಿಂಬದಿ ಚಕ್ರ ಬಾಲಕಿ ತಲೆ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










