ಬೈಕ್‍ಗೆ ಡಿಕ್ಕಿ ಹೊಡೆದಿದ್ದಕ್ಕೆ ಚಂದ್ರು ಕೊಲೆ : ಉಲ್ಟಾ ಹೊಡೆದ ಆರಗ ಜ್ಞಾನೇಂದ್ರ.

69
firstsuddi

ಬೆಂಗಳೂರು : ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಚಂದ್ರು ಕೊಲೆ ಮಾಡಲಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ತಮ್ಮ ಹೇಳಿಕೆಗೆ ಯೂಟರ್ನ್ ಹೊಡೆದಿದ್ದು, ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ.

ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಕ್ಷಣದ ಮಾಹಿತಿ ಆಧರಿಸಿ ನಾನು ಹೇಳಿಕೆ ನೀಡಿದ್ದೆ. ನಾನು ನೀಡಿರುವ ಹೇಳಿಕೆ ತಪ್ಪಾಗಿದೆ. ಇದೀಗ ಪೊಲೀಸರು ವಿಸ್ತೃತವಾದ ಮಾಹಿತಿ ನೀಡಿದ್ದಾರೆ. ಬೈಕ್ ಡಿಕ್ಕಿ ಹೊಡೆದ ವಿಚಾರಕ್ಕೆ ಜಗಳ ನಡೆದು ಕೊಲೆ ಮಾಡಲಾಗಿದೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ರಕ್ತಸ್ರಾವವಾಗಿ ಚಂದ್ರು ಸಾವನ್ನಪ್ಪಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ.

ಚಂದ್ರು ಕೊಲೆ ಪ್ರಕರಣ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 5ರ ಮಧ್ಯರಾತ್ರಿ ಸೈಮನ್ ರಾಜ್ ಮತ್ತು ಚಂದ್ರು(22) ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುತ್ತಿದ್ದರು. ಈ ವೇಳೆ ಇವರ ಮತ್ತು ಶಾಹಿದ್ ಓಡಿಸುತ್ತಿದ್ದ ಬೈಕ್ ಗೆ ಪರಸ್ಪರ ತಗುಲಿದೆ. ಈ ವಿಷಯಕ್ಕೆ ಮೊದಲು ಗಲಾಟೆಗೆ ಪ್ರಾರಂಭವಾಗಿದೆ.

ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.