ಬೈಪಾಸ್ ಸರ್ಜರಿ ಹಿನ್ನಲೆ ; ಐಸಿಯುನಿಂದ ರಾಷ್ಟ್ರಪತಿ ಕೋವಿಂದ್ ವಿಶೇಷ ವಾರ್ಡ್ ಗೆ ಶಿಫ್ಟ್…

115
firstsuddi

ನವದೆಹಲಿ : ಎದೆಯಲ್ಲಿ ನೋವು ಕಾಣಿಸಿಕೊಂಡ ಕಾರಣ ಮಾರ್ಚ್. 26 ರಂದು ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿಯವರು ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ಗೆ ಸ್ಥಳಾಂತರಗೊಂಡಿದ್ದರು. ಮಾರ್ಚ್. 30 ರಂದು ಬೈಪಾಸ್ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಮ್ ನಾಥ್ ಕೋವಿಂದ್ ಅವರನ್ನು ಇಂದು ಐಸಿಯುನಿಂದ ವಿಶೇಷ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.

ರಾಮನಾಥ್ ಕೋವಿಂದ್ ಅವರ ಆರೋಗ್ಯ ಸುಧಾರಿಸಿದೆ. ಏಮ್ಸ್ ನ ವೈದ್ಯರು ಅವರ ಮೇಲೆ ನಿರಂತರವಾಗಿ ನಿಗಾ ಇರಿಸಿದ್ದು, ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆಯನ್ನು ನೀಡಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.