ಬೊಮ್ಮಾಯಿ ಒಬ್ಬ ಕೋಮುವಾದಿ ಸಿಎಂ, ಯಾವ ಸಿಎಂ ಕೂಡ ಇಷ್ಟು ಕೋಮುವಾದಿಯಾಗಿರಲಿಲ್ಲ : ನಟ ಚೇತನ್.

87
firstsuddi

ದಾವಣಗೆರೆ : ಸಿಎಂ ಬೊಮ್ಮಾಯಿ ಒಬ್ಬ ಕೋಮುವಾದಿ ಮುಖ್ಯಮಂತ್ರಿ. ಯಾವ ಸಿಎಂ ಕೂಡ ಇಷ್ಟು ಕೋಮುವಾದಿಯಾಗಿರಲಿಲ್ಲ. ಇವರಲ್ಲಿ ಎಲ್ಲರಿಗಿಂತ ಹೆಚ್ಚು ಕೋಮುವಾದ ಇದೆ ಎಂದು ನಟ ಚೇತನ್ ಅಹಿಂಸಾ ಆಕ್ರೋಶ ಹೊರಹಾಕಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಅವರ ತಂದೆ ಒಳ್ಳೆಯ ಪ್ರಗತಿಪರ ಸಿಎಂ ಆಗಿದ್ದರು. ಮತಾಂತರ ನಿಷೇಧ ಕಾಯ್ದೆ ಸಂವಿಧಾನದ ವಿರೋಧ ನೀತಿ. ಅಂಬೇಡ್ಕರ್, ಬಸವಣ್ಣನವರು ಕೂಡ ಅವರಿಗೆ ಬೇಕಾದ ಧರ್ಮ ಸ್ಥಾಪನೆ ಮಾಡಿದ್ದಾರೆ. ಜನರು ಅವರಿಗೆ ಬೇಕಾದ ಧರ್ಮಕ್ಕೆ ಸೇರಬಹುದು ಎನ್ನುವುದು ಸಂವಿಧಾನದಲ್ಲಿದೆ. ಬಲವಂತವಾಗಿ ಮತಾಂತರ ಮಾಡಿದರೆ ಅದಕ್ಕೆ ಬೇಕಾದರೆ ಕ್ರಮ ಕೈಗೊಳ್ಳಲಿ. ಜನರಿಗೆ ಹೆದರಿಸಿ, ಬೆದರಿಸಿ ಕಾಯ್ದೆ ತರುವುದು ಸರಿಯಲ್ಲ. ಅಲ್ಪಸಂಖ್ಯಾತ, ಕ್ರಿಸ್ಚಿಯನ್ರ ಮೇಲೆ ದಬ್ಬಾಳಿಕೆ ಮಾಡಿ ಕಾಯ್ದೆ ತರುವಂತಾಗಿದೆ ಎಂದು ಕಿಡಿ ಕಾರಿದರು.

ಕೆಲ ಸ್ವಾಮೀಜಿಗಳು ಸಸ್ಯಾಹಾರಿಗಳಿಗೆ ಪ್ರತ್ಯೇಕ ಶಾಲೆಗಳನ್ನ ಕೇಳುತ್ತೀರುವುದು ಬೇಸರದ ವಿಚಾರವಾಗಿದೆ. ಮೊಟ್ಟೆ ತಿನ್ನುವವರ ಶಾಲೆ, ಮಟನ್ ತಿನ್ನುವವರ ಶಾಲೆ ಹೀಗೆ ಪ್ರತ್ಯೇಕ ಶಾಲೆಗಳಾಗಿ ಛಿದ್ರ ಛಿದ್ರ ಮಾಡುವುದೇ ಸ್ವಾಮೀಜಿಗಳ ಉದ್ದೇಶವೇವಾಗಿದೆ. ಇದನ್ನೇ ಬಸವಣ್ಣನವರು ಸ್ವಾಮೀಜಿಗಳಿಗೆ ಹೇಳಿಕೊಟ್ಟಿದ್ದಾ? ಇದು ಬಸವ ತತ್ವ ಅಲ್ಲ, ಸ್ವಾಮೀಜಿಗಳ ಸ್ವಾರ್ಥದ ಆಲೋಚನೆ ಇದು ಎಂದು ವಾಗ್ದಾಳಿ ನಡೆಸಿದರು.