ಚಿಕ್ಕಬಳ್ಳಾಪುರ : ಬೋರ್‍ವೆಲ್ ಪೈಪ್‍ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಹೊಸಹಡ್ಯ ಗ್ರಾಮದ ಬಳಿ ನಡೆದಿದೆ. ಬೈರಾರೆಡ್ಡಿ ಎಂಬುವವರ ಜಮೀನಿನಲ್ಲಿ ಬೋರ್‍ವೆಲ್ ಕೊರೆಯಲು ಲಾರಿಯಲ್ಲಿ ಪೈಪ್‍ಗಳನ್ನು ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










