ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ-10 ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆ…

174
firstsuddi

ಕೊಡಗು : ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ತಲಾಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಂದು ಶವ ಮತ್ತೆಯಾಗಿದ್ದು, ಗುರುತಿಸಲು ಸಾಧ್ಯವಾಗದಂತಹ ಸ್ಥತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ತಿಳಿಸಿದ್ದಾರೆ. ಕಳೆದ 10 ದಿನಗಳ ಹಿಂದೆ ತಲಾಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದ ಐವರ ಪೈಕಿ ಮೂವರ ಮೃತದೇಹ ಸಿಕ್ಕಿದಂತಾಗಿದೆ. ಗುಡ್ಡ ಕುಸಿದು ಹತ್ತು ದಿನದ ಬಳಿಕ ಕಳೆದ ಎರಡು ದಿನಗಳ ಹಿಂದೆ ನಾರಾಯಣ್ ಆಚಾರ್ ಅವರ ಮೃತದೇಹ ದೊರೆತ ಜಾಗದಿಂದ ಸ್ವಲ್ಪ ದೂರದಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಅದು ಮಹಿಳೆಯೋ ಅಥವಾ ಪುರುಷನೋ ಎಂದು ಗುರುತಿಸಲು ಸಾಧ್ಯವಾಗದ ಮಟ್ಟಿಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನೂ ಎರಡು ಮೃತದೇಹಗಳು ಪತ್ತೆಯಾಗಬೇಕಾಗಿದ್ದು, ಯಾವುದೇ ಕಾರಣಕ್ಕೂ ಕಾರ್ಯಾಚರಣೆ ಬಿಡುವುದಿಲ್ಲ ಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ.