ಭರವಸೆ ಸಮಿತಿ ಅಧ್ಯಕ್ಷ ಎ.ಟಿ. ರಾಮಸ್ವಾಮಿ ರಾಜೀನಾಮೆ…

289
firstsuddi

ಬೆಂಗಳೂರು : ಸರ್ಕಾರದ ಭರವಸೆ ಸಮಿತಿ ಅಧ್ಯಕ್ಷರಾದ ಅರಕಲಗೂಡು ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಬಿಎಂ ಕಾಲುವೆ ಬಳಿ ಇರುವ 305 ಎಕರೆ ಸರ್ಕಾರಿ ಭೂಮಿ ಭೂಗಳ್ಳರ ಪಾಲಾಗಿದ್ದು, ಭೂಗಳ್ಳರಿಂದ ಭೂಮಿಯನ್ನು ವಶಕ್ಕೆ ಪಡೆಯಲು ಮೈತ್ರಿ ಸರ್ಕಾರ ಭರವಸೆ ನೀಡಿದ್ದು, ಭೂಮಿಯನ್ನು ಹಿಂಪಡೆಯುವಲ್ಲಿ ಮೈತ್ರಿ ಸರ್ಕಾರ ಹಿಂದೆ ಸರಿದಿದೆ. ಈ ಬಗ್ಗೆ ಸರ್ಕಾರದ ಮೇಲೆ ಬೇಸರಗೊಂಡು ಎ.ಟಿ. ರಾಮಸ್ವಾಮಿ ಅವರು ಸ್ಪೀಕರ್ ರಮೇಶ್ ಕುಮಾರ್ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.