ಭಾರತ-ಆಸ್ಟ್ರೇಲಿಯಾ ಪಂದ್ಯದ ವೇಳೆ ಪ್ರೇಮ ನಿವೇದನೆ-ವೀಡಿಯೋ ವೈರಲ್…

291

ಕ್ಯಾನ್ಬೆರಾ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಅಂತರಾಷ್ಟ್ರೀಯ ಏಕದಿನ ಪಂದ್ಯದ ವೇಳೆ ಭಾರತ ಕ್ರಿಕೆಟ್ ತಂಡದ ಅಭಿಮಾನಿಯೊಬ್ಬ ಆಸ್ಟ್ರೇಲಿಯಾ ಯುವತಿಗೆ ಪ್ರೇಮ ನಿವೇದನೆ ಮಾಡಿದ್ದು, ಸದ್ಯ ಆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಸಿಡ್ನಿಯ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ನಡುವೆ ಪಂದ್ಯ ನಡೆಯುತ್ತಿದ್ದ ವೇಳೆ ಜನರ ನಡುವೆಯೇ ಮೊಣಕಾಲೂರಿ ಯುವತಿಗೆ ಪ್ರಪೋಸ್ ಮಾಡಿದ್ದು, ಯುವಕನ ಈ ಪ್ರೇಮ ನಿವೇದನೆಯನ್ನು ಯುವತಿಯೂ ಕೂಡಾ ಒಪ್ಪಿಕೊಂಡಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.