ಭಾರತದ 14 ನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಜಗದೀಪ್ ಧನಕರ್.

58
firstsuddi

ನವದೆಹಲಿ : ಭಾರತದ 14 ನೇ ಉಪ ರಾಷ್ಟ್ರಪತಿಯಾಗಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧನಕರ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದ್ದಾರೆ.  ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಸಚಿವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತೀಚೆಗೆ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಗದೀಪ್ ಧನಕರ್ ಅವರು, ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಸೋಲಿಸಿದ್ದರು.