ಭಾರತದಲ್ಲಿ ಆತ್ಮಾಹುತಿ ಬಾಂಬ್ ದಾಳಿಯ ಬೆದರಿಕೆ ಹಾಕಿದ ಅಲ್ ಖೈದಾ.

64
firstsuddi

ನವದೆಹಲಿ : ಭಾರತದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಅಲ್ ಖೈದಾ ಉಗ್ರಗಾಮಿ ಸಂಘಟನೆ ಬೆದರಿಕೆ ಹಾಕಿದೆ.

ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್ ನಲ್ಲಿ ಪ್ರವಾದಿಯ ಗೌರವಕ್ಕಾಗಿ ಹೋರಾಡಲು ಆತ್ಮಾಹುತಿ ದಾಳಿಗಳನ್ನು ನಡೆಸುವುದಾಗಿ ಅಲ್ ಖೈದಾ ಜೂ.6 ರಂದು ಹೊರಡಿಸಿದ ತನ್ನ ಅಧಿಕೃತ ಪತ್ರದಲ್ಲಿ ತಿಳಿಸಿದೆ. ನಮ್ಮ ಪ್ರವಾದಿಯನ್ನು ಅವಮಾನಿಸುವವರನ್ನು ನಾವು ಕೊಲ್ಲಲು ಬಯಸುತ್ತೇವೆ. ನಮ್ಮ ಪ್ರವಾದಿಯನ್ನು ಅವಮಾನಿಸುವ ಧೈರ್ಯವಿರುವವರನ್ನು ಸ್ಫೋಟಿಸಲು ನಾವು ನಮ್ಮ ದೇಹ, ನಮ್ಮ ಮಕ್ಕಳ ದೇಹಗಳೊಂದಿಗೆ ಸ್ಫೋಟಕಗಳನ್ನು ಸಿದ್ಧಪಡಿಸಿದ್ದೇವೆ. ಅಂತವರು ಈಗ ದೆಹಲಿ, ಉತ್ತರ ಪ್ರದೇಶ, ಗುಜರಾತ್ ಮತ್ತು ಮುಂಬೈನಲ್ಲಿ ತಮ್ಮ ಅಂತ್ಯಕ್ಕಾಗಿ ಕಾಯಬೇಕಾಗಿದೆ ಎಂದು ಎಚ್ಚರಿಕೆ ನೀಡಿದೆ.

ಇತ್ತೀಚೆಗೆ ಕೆಲವು ಬಿಜೆಪಿ ನಾಯಕರು ಪ್ರವಾದಿ ಮಹಮ್ಮದ್ ಪೈಂಗಬರ್ ಅವರನ್ನು ಅವಮಾನಿಸಿದ್ದರು. ಅದರಲ್ಲಿ ಪ್ರಮುಖವಾಗಿ ಕಳೆದ ತಿಂಗಳು ಖಾಸಗಿ ವಾಹಿನಿಯ ಚರ್ಚೆಯಲ್ಲಿ ಭಾಗಿಯಾಗಿದ್ದ ನೂಪುರ್ ಶರ್ಮಾ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿ ನಾಯಕರ ವಿವಾದಾತ್ಮಕ ಹೇಳಿಕೆಗಳನ್ನು ಹಲವು ಮುಸ್ಲಿಂ ರಾಷ್ಟ್ರಗಳು ತೀವ್ರವಾಗಿ ಟೀಕಿಸಿವೆ.