ಭಾರತವನ್ನು ನೋಡುವ ಪ್ರಪಂಚದ ದೃಷ್ಟಿಕೋನ ಬಹಳಷ್ಟು ಬದಲಾಗಿದೆ : ಮೋದಿ.

68
firstsuddi

ನವದೆಹಲಿ : ನಿನ್ನೆ 2022-23ನೇ ಸಾಲಿನ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ ಬೆನ್ನಲ್ಲೇ, ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಇಂದು ಭಾರತವನ್ನು ನೋಡುವ ಪ್ರಪಂಚದ ದೃಷ್ಟಿಕೋನವು ಬಹಳಷ್ಟು ಬದಲಾಗಿದೆ. ಈಗ ಜಗತ್ತು ಬಲಿಷ್ಠ ಭಾರತವನ್ನು ನೋಡಲು ಬಯಸುತ್ತದೆ ಎಂದು ಹೇಳಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಅನ್ನು ಅದರ ವಿಶಾಲತೆಯನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತವಾಗಿ ವಿವರಿಸಿದ್ದರು. ನಾನು ಇಂದು ಬಜೆಟ್ ನ ಪ್ರಮುಖ ಅಂಶಗಳತ್ತ ಗಮನ ಹರಿಸಲು ಪ್ರಯತ್ನಿಸುತ್ತೇನೆ ಎಂದ ಅವರು, ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಮೂಲಕ ದೇಶವನ್ನು ತ್ವರಿತಗತಿಯಲ್ಲಿ ಮುನ್ನಡೆಸುವುದು ನಮಗೆ ಅನಿವಾರ್ಯವಾಗಿದೆ. ಇದು ಹೊಸ ಅವಕಾಶಗಳನ್ನು ಹಾಗೂ ಹೊಸ ಸಂಕಲ್ಪಗಳ ನೆರವೇರಿಸುವ ಸಮಯವಾಗಿದೆ. ಸ್ವಾವಲಂಬಿ ಭಾರತದ ಅಡಿಪಾಯದ ಮೇಲೆ ಆಧುನಿಕ ಭಾರತವನ್ನು ನಿರ್ಮಿಸುವುದು ಬಹಳ ಮುಖ್ಯ ಎಂದರು.

ಯುವಕರು, ಮಧ್ಯಮ ವರ್ಗ, ಬಡವರ ಅಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ್ದಾರೆ. ಇದೊಂದು ಉತ್ತಮವಾದ ಬಜೆಟ್ ಆಗಿದೆ. ದೇಶದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಡವರಿಗಾಗಿ 80 ಲಕ್ಷ ಮನೆ ನಿರ್ಮಾಣ ಗುರಿ ಹೊಂದಲಾಗಿದೆ. ಅದಕ್ಕಾಗಿ ಬಜೆಟ್ ನಲ್ಲಿ 48 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರ ಮಹಿಳೆಯರನ್ನು ಮನೆಯ ಮಾಲೀಕರನ್ನಾಗಿ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

7 ವರ್ಷಗಳ ಹಿಂದೆ, ಭಾರತದ ಜಿಡಿಪಿ 1 ಲಕ್ಷ 10,000 ಕೋಟಿ ರೂ.ಗಳಷ್ಟಿತ್ತು. ಆದರೆ ಇಂದು ಅದು ಸುಮಾರು 2 ಲಕ್ಷದ 30,000 ಕೋಟಿ ರೂ.ಗೆ ಏರಿಕೆಯಾಗಿದೆ. ದೇಶದ ವಿದೇಶಿ ವಿನಿಮಯ ಮೀಸಲು ಕೂಡ 200 ಶತಕೋಟಿಯಿಂದ ಡಾಲರ್ ನಿಂದ 630 ಶತಕೋಟಿ ಡಾಲರ್ ಗೆ ಏರಿದೆ. ಇದಕ್ಕೆಲ್ಲಾ ನಮ್ಮ ಸರ್ಕಾರದ ಪರಿಣಾಮಕಾರಿ ನೀತಿಗಳೇ ಕಾರಣ ಎಂದು ತಿಳಿಸಿದರು.

ನಮ್ಮ ಸರ್ಕಾರದ ಪ್ರಯತ್ನದಿಂದ ಸುಮಾರು 9 ಕೋಟಿ ಗ್ರಾಮೀಣ ಕುಟುಂಬಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಈ ಪೈಕಿ ಕಳೆದ 2 ವರ್ಷಗಳಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 5 ಕೋಟಿಗೂ ಹೆಚ್ಚು ಸಂಪರ್ಕಗಳನ್ನು ಅಳವಡಿಸಲಾಗಿದೆ. ಇದು ಬಡತನವನ್ನು ಹೋಗಲಾಡಿಸಲು ಮತ್ತು ಅವರನ್ನು ಮುಂದೆ ಕೊಂಡೊಯ್ಯಲು ಸಹಾಯ ಮಾಡುತ್ತದೆ ಎಂದರು.