ಭಾರತ್ ಜೋಡೋ : ಅಮ್ಮನ ಶೂ ಲೇಸ್ ಕಟ್ಟಿದ ರಾಹುಲ್ ಗಾಂಧಿ.

84
firstsuddi

ಮಂಡ್ಯ : ಎರಡು ದಿನದ ವಿಶ್ರಾಂತಿ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಇಂದು ಮತ್ತೆ ಆರಂಭವಾಗಿದೆ. ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೆಲಹೊತ್ತು ಹೆಜ್ಜೆ ಹಾಕಿದರು. ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಹರಿಪ್ರಸಾದ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪಾದಯಾತ್ರೆಯಲ್ಲಿ ನಡೆಯುತ್ತಿರುವಾಗ ಸೋನಿಯಾ ಗಾಂಧಿ ಅವರ ಶೂ ಲೇಸ್ ಬಿಚ್ಚಿತ್ತು. ಆಗ ಪುತ್ರ ರಾಹುಲ್ ಗಾಂಧಿ ಅವರು ತಮ್ಮ ತಾಯಿಯ ಶೂ ಲೇಸ್ ಕಟ್ಟಿದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ 10-15 ನಿಮಿಷಗಳ ಕಾಲ ಮಾತ್ರ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಸಾಗಿದರು. ಬಳಿಕ ಅವರನ್ನು ರಾಹುಲ್ ಗಾಂಧಿ ಕಾರು ಹತ್ತಿಸಿ ಕಳುಹಿಸಿದರು. ಇಂದು ಸೋನಿಯಾ ಗಾಂಧಿ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.