ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾದ ನಟ ಕಮಲ್ ಹಾಸನ್.

77
firstsuddi

ನವದೆಹಲಿ : ಭಾರತ್ ಜೋಡೋ ಯಾತ್ರೆಯಲ್ಲಿ ತಮಿಳು ಚಿತ್ರರಂಗದ ಸ್ಟಾರ್ ನಟ ಕಮಲ್ ಹಾಸನ್ ಅವರು ಇಂದು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.

ಇಂದು ಫರಿದಾಬಾದ್ ಮೂಲಕ ರಾಷ್ಟ್ರ ರಾಜಧಾನಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯನ್ನು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಸ್ವಾಗತಿಸಿದರು. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಹಿರಿಯ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ಭೂಪಿಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ, ರಣದೀಪ್ ಸುರ್ಜೆವಾಲಾ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಸೆ.7ರಂದು ಕನ್ಯಾಕುಮಾರಿಯಲ್ಲಿ ಆರಂಭವಾದ ಭಾರತ್ ಜೋಡೋ ಯಾತ್ರೆಯು ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನ, ಹರಿಯಾಣದಲ್ಲಿ ಸಂಚರಿಸಿ ಈಗ ದೆಹಲಿ ಪ್ರವೇಶಿಸಿದೆ.