ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಸಂಸದ ಹೃದಯಾಘಾತದಿಂದ ನಿಧನ…

50
firstsuddi

ಚಂಡೀಗಢ : ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಇಂದು ಮುಂಜಾನೆ ಪಂಜಾಬ್ ನ ಜಲಂಧರ್ ಬಳಿ ತೆರಳುತ್ತಿದ್ದಂತೆ ಸಂತೋಖ್ ಸಿಂಗ್ ಚೌಧರಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಫಗ್ವರ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಚೌಧರಿ ನಿಧನ ಹೊಂದಿದ ಸುದ್ದಿ ಹೊರ ಬರುತ್ತಿದ್ದಂತೆ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಲಾಯಿತು. ಚೌಧರಿ ನಿಧನಕ್ಕೆ ರಾಹುಲ್ ಗಾಂಧಿ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

2014 ಮತ್ತು 2019ರಲ್ಲಿ ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸಂತೋಖ್ ಸಿಂಗ್ ಚೌಧರಿ ಗೆದ್ದಿದ್ದರು.