ಮೂಡಿಗೆರೆ : ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ಜಾರಿಗೆ ತರುವ ಕ್ರಮವನ್ನು ಖಂಡಿಸಿ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಮೂಡಿಗೆರೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದಲ್ಲಿ ಎಂದಿನಂತೆ ಆಟೋಗಳು ಸಂಚರಿಸುತ್ತಿದ್ದು, ಹೋಟೆಲ್, ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಪೊಲೀಸರು ಪಟ್ಟಣದಾದ್ಯಂತ ಗಸ್ತು ತಿರುಗುತ್ತಿದ್ದಾರೆ.











