ಭಾರಿ ಮಳೆಗೆ ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್ ವೇ ಜಲಾವೃತ…

46
firstsuddi

ಬೆಂಗಳೂರು : ತಡರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್ ವೇ ದಶಪಥ ಹೆದ್ದಾರಿ ಜಲಾವೃತವಾಗಿದೆ.

ರಾಮನಗರ ಸಮೀಪದ ಸಂಘಬಸವನ ದೊಡ್ಡಿ ಗ್ರಾಮದ ಸಮೀಪ ಹೆದ್ದಾರಿಯಲ್ಲಿ ಮಳೆ ನೀರು ನಿಂತಿದ್ದು, ಹೆದ್ದಾರಿಯಲ್ಲಿಯೇ ವಾಹನಗಳು ಕೆಟ್ಟು ನಿಂತಿದೆ. ಇದರಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಳೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದಿತ್ತು. ಆದರೀಗ ಉದ್ಘಾಟನೆಯಾದ 6 ದಿನಕ್ಕೆ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆನೀರು ಸರಾಗವಾಗಿ ಹರಿದುಹೋಗದೆ ಅವಾಂತರ ಸೃಷ್ಟಿಯಾಗಿದ್ದು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಮಳೆ ನೀರಿಗೆ ಕೆಟ್ಟುನಿಂತ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದವರು ಅನಾಹುತದಿಂದ ಪಾರಾಗಿದ್ದಾರೆ. ಇಷ್ಟೆಲ್ಲ ಸಮಸ್ಯೆ ಆಗುತ್ತಿದ್ದರು ಎನ್ ಹೆಚ್ ಎಐ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಾರದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.