ಭೀಕರ ರಸ್ತೆ ಅಪಘಾತ- ಒಂದೇ ಕುಟುಂಬದ ಮೂವರು ಸಾವು…

62
firstsuddi

ತುಮಕೂರು: ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಅರಸಾಪುರ ಗೇಟ್ ಬಳಿ ಸಂಭವಿಸಿದೆ.

ಮೃತರನ್ನು 40 ವರ್ಷದ ಅನಿತಾ, ಆಕೆಯ ಮಗ 18 ವರ್ಷದ ಬಾಲಾಜಿ ಮತ್ತು ಸೋದರಳಿಯ 20 ವರ್ಷದ ಪವನ್ ಎಂದು ಗುರುತಿಸಲಾಗಿದೆ.

ಮೃತರು ಮಧುಗಿರಿಯ ವೀರೇನಹಳ್ಳಿ ತಾಂಡದ ನಿವಾಸಿಗಳಾಗಿದ್ದು, ಮೂವರು ದ್ವಿಚಕ್ರ ವಾಹನದಲ್ಲಿ ಮಧುಗಿರಿಯಿಂದ ಗೌರಿಬಿದನೂರು ಕಡೆಗೆ ಹೋಗುತ್ತಿದ್ದ ವೇಳೆ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರದಡಿಗೆ ವಾಹನ ಸಿಲುಕಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕೊರಟಗೆರೆ ಸಬ್ಇನ್ಸ್‍ಪೆಕ್ಟರ್ ಚೇತನ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.