ಭೀಕರ ರಸ್ತೆ ಅಪಘಾತ – ಒಂಬತ್ತು ಮಂದಿ ಸಾವು…

72
firstsuddi

ಅಸ್ಸೋಂ: ಕರೀಂಗಂಜ್ ಜಿಲ್ಲೆಯ ಬೈತಖಾಲ್ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಪೊಲೀಸರು ತಿಳಿಸಿದ್ದಾರೆ.

ರಿಕ್ಷಾಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಸಂತ್ರಸ್ತರು ಛಾತ್ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದರು ಎನ್ನಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.