ಭೀಕರ ರಸ್ತೆ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು…

56
firstsuddi

ಕಲಬುರಗಿ: ಅಫಜಲಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ನಡೆದಿದೆ.

ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (05) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಪೂಜಾ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತರೆಲ್ಲರೂ ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರು ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಜೀಪ್‍ನಲ್ಲಿ ಹೊರಟಿದ್ದರು. ಇತ್ತ ಕಲಬುರಗಿ ಕಡೆಯಿದ ಹೊರಟಿದ್ದ ಲಾರಿಗೆ ಈ ಜೀಪ್ ಡಿಕ್ಕಿ ಹೊಡೆದಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.