ಭೀಕರ ರಸ್ತೆ ಅಪಘಾತ ; ಸ್ಥಳದಲ್ಲೇ ಸಿಪಿಐ ದಂಪತಿ ಸಾವು…

77
firstsuddi

ಕಲಬುರಗಿ : ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಿಜಯಪುರ ಜಿಲ್ಲೆ ಸಿಂದಗಿಯ ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರವಿ ಉಕ್ಕುಂದ(43), ಮಧು(40) ಮೃತ ದಂಪತಿ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಸಿಪಿಐ ದಂಪತಿ ಆಗಮಿಸುತ್ತಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ಕಂಟೇನರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದಾರೆ.

ಸಿಪಿಐ ರವಿ ಉಕ್ಕುಂದ ಚಲಾಯಿಸುತ್ತಿದ್ದ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.