ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ…

132
firstsuddi

ಬೆಂಗಳೂರು : ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಈ ಹಿನ್ನೆಲೆ, ಬೆಂಗಳೂರಿಗೆ ಆಗಮಿಸಿದ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ಮತ್ತು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಸಾವಿರಾರು ರೈತರು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೂ ಬೃಹತ್ ಮೆರಣಿಗೆ ಹಮ್ಮಿಕೊಂಡಿದ್ದು, ಪ್ರತಿಭಟನೆಯಲ್ಲಿ ದಲಿತ ಸಂಘಟನೆ, ರೈತ, ಕಾರ್ಮಿಕ ಸಂಘಟನೆ ಸೇರಿದಂತೆ 30ಕ್ಕೂ ಹೆಚ್ಚು ಸಂಘಟನೆಗಳಿಂದ ಈ ಬೃಹತ್ ರ್ಯಾಲಿ ಆರಂಭಿಸಲಾಗಿದ್ದು, ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಸುಮಾರು ಒಂದೂವರೆ ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ.