ಹೊಸ ವರ್ಷದ ಮೊದಲ ದಿನವೇ ಜಪಾನ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ ಇದುವರೆಗೆ 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಮಧ್ಯೆಯೇ, ಜೂನಿಯರ್ ಎನ್ಟಿಆರ್ ಅವರು ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಜಪಾನ್ ಪ್ರವಾಸಕ್ಕೆ ತೆರಳಿದ್ದರು. ಭೂಕಂಪ ಆಗುವ ಸಮಯದಲ್ಲಿಯೂ ಅವರು ಅಲ್ಲಿಯೇ ಇದ್ದರು. ಭೂಕಂಪದ ಸುದ್ದಿ ಕೇಳುತ್ತಿದ್ದಂತೆಯೇ ಜ್ಯೂನಿಯರ್ ಎನ್ಟಿಆರ್ ಫ್ಯಾನ್ಸ್ ಶಾಕ್ಗೆ ಒಳಗಾಗಿದ್ದರು. ಇದೀಗ ಭಾರತಕ್ಕೆ ಸುರಕ್ಷಿತವಾಗಿ ವಾಪಸಾಗಿರುವ ನಟ, ತಾವು ಸೇಫ್ ಆಗಿ ವಾಪಸಾಗಿರುವುದಾಗಿ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ. ಜಪಾನ್ನಲ್ಲಿ ಭೂಕಂಪ ಆಗಿದ್ದು ಶಾಕಿಂಗ್ ಆಗಿದೆ. ನಾನು ಒಂದು ವಾರ ಅಲ್ಲಿಯೇ ಕಳೆದಿದ್ದೇನೆ. ಭೂಕಂಪದಿಂದ ಹಾನಿಗೆ ಒಳಗಾದವರ ಬಗ್ಗೆ ದುಃಖ ಇದೆ. ಅಲ್ಲಿನ ಜನ ಬೇಗ ಚೇತರಿಸಿಕೊಳ್ಳಲಿ. ದೃಢವಾಗಿರಿ ಜಪಾನ್ ಎಂದು ಜ್ಯೂ.ಎನ್ಟಿಆರ್ ಬರೆದುಕೊಂಡಿದ್ದಾರೆ.
ಸದ್ಯ ಜ್ಯೂನಿಯರ್ ಎನ್ಟಿಆರ್ ಅವರು ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಆರ್ಆರ್ಆರ್’ ಸಿನಿಮಾದ ಬಳಿಕ ಈ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಭಾರೀ ನಿರೀಕ್ಷೆಗಳಿವೆ.










