ಭ್ರಷ್ಟಾಚಾರ ಆರೋಪ : ಕೆಎಎಸ್ ಅಧಿಕಾರಿ ಅಮಾನತು…

67
firstsuddi

ಬೆಂಗಳೂರು : ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಕೆಎಎಸ್ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.

ಸರ್ಕಾರ ಉಪ ಕಾರ್ಯದರ್ಶಿ-3 ನಗರಾಭಿವೃದ್ಧಿ ಇಲಾಖೆಯ ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಯಾಗಿರುವ ಎಲಿಷಾ ಆಂಡ್ರೊಸ್ ಅವರನ್ನು ಅಮಾನತು ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ಇಂಜಿನಿಯರ್ ಗಳ ಪದೋನ್ನತಿಗೆ ಸಂಬಂಧಿಸಿದಂತೆ ಇಂಜಿನಿಯರ್ ಗಳಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೇ ಕಡತ ವಿಲೇವಾರಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪವನ್ನು ಎಲಿಷಾ ಆಂಡ್ರೂಸ್ ಎದುರಿಸುತ್ತಿದ್ದಾರೆ. ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತನಿಖೆಗೆ ಆದೇಶಿಸಿದ್ದರು. ಮೇಲ್ನೋಟಕ್ಕೆ ಆರೋಪ ನಿಜವೆಂದು ಕಂಡ ಬಂದ ಹಿನ್ನೆಲೆಯಲ್ಲಿ ಸರ್ಕಾರ ಕ್ರಮ ಜರುಗಿಸಿದೆ.